Phone : +91 0824 2230452
EMAIL : info@shakthi.net.in

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ನಾಡು, ನುಡಿ-ಅಂದು ಇಂದು’ ಉಪನ್ಯಾಸ

ಮಂಗಳೂರು : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ ಪೂ ಕಾಲೇಜು ವತಿಯಿಂದ ನವಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನಾಡು, ನುಡಿ – ಅಂದು ಇಂದು ಉಪನ್ಯಾಸ ಕಾರ್ಯಕ್ರಮವು ಶಕ್ತಿ ಶಾಲೆಯಲ್ಲಿ ನಡೆಯಲಿದೆ. ಉಪನ್ಯಾಸವನ್ನು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಮೀನಾಕ್ಷಿ ರಾಮಚಂದ್ರ ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಪಿಯುಷ್ ರಾಡ್ರಿಗಸ್, ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಪ್ರಧಾನ ಸಂಪಾದಕಿ ಶಹನಾಝ್ ಎಂ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಪ ಪೂ ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್ ವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಇಂಚರ ತಂಡ ಉರ್ವ ಇವರಿಂದ ಕನ್ನಡ ಗೀತ ಗಾಯನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾಕ್, ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಕಾರ್ಯದರ್ಶಿ ಸಂಜೀತ್ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ ಮತ್ತು ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಉಪಸ್ಥಿತರಿರುತ್ತಾರೆ.